ಅಧ್ಯಯನ ಕೇಂದ್ರವಾಗಲಿರುವ ಸೈಂಟ್ ಮೇರೀಸ್ ದ್ವೀಪ

ಉಡುಪಿ: ಮಲ್ಪೆಯ ಸೈಂಟ್ ಮೇರೀಸ್ ದ್ವೀಪವನ್ನು ಅಧ್ಯಯನ ಕೇಂದ್ರವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಚಿಂತನೆ ನಡೆಸಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಸೈಂಟ್ ಮೇರೀಸ್ ದ್ವೀಪವನ್ನು ಕೇವಲ ಪ್ರವಾಸಿ ತಾಣವೆಂದು ಬಗೆಯದೆ, ಎಲ್ಲರಿಗೂ ಪ್ರಯೋಜನವಾಗುವ ನಿಟ್ಟಿನಲ್ಲಿ ಅದನ್ನು ಅಧ್ಯಯನ ಕೇಂದ್ರವಾಗಿ ಮಾರ್ಪಡಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದರು.

ದ್ವೀಪದಲ್ಲಿ ನಡೆಯುತ್ತಿರುವ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಉಪ ಸಮಿತಿಯೊಂದನ್ನು ರಚಿಸಿದ್ದು, ಸಮಿತಿಯು ಸ್ಥಳ ಪರಿಶೀಲನೆ ನಡೆಸಿದೆ. ಪರಿಸರ ಸ್ನೇಹಿ ಸೆಲ್ಫಿ ಪಾಯಿಂಟ್ ಒಂದನ್ನು ಸುರಕ್ಷಿತ ಸ್ಥಳದಲ್ಲಿ ನಿರ್ಮಿಸಲಿದ್ದೇವೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.