ಸಾಮೂಹಿಕ ಸರಳ ವಿವಾಹ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ 50,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಿ, ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಕಚೇರಿಗೆ ನೀಡಬೇಕೆಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.