ಶ್ರೀಕೃಷ್ಣ ಮಠದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ತೆಂಕುತಿಟ್ಟು ಯಕ್ಷಗಾನ ಅಧ್ಯಯನ ಕೇಂದ್ರ, ಶ್ರೀ ಸೋದೆ ವಾದಿರಾಜ ಮಠ ಉಡುಪಿ ಇವರಿಂದ “ಶ್ರೀ ದೇವಿ ಮಹಾತ್ಮೆ” ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಿತು.