ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 15 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/udupi/public, ಸಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ. ಸಂಖ್ಯೆ: 0820-2574596, ಕಾರ್ಕಳ ದೂ. ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ಕೆ ಕರೆ ಮಾಡುವಂತೆ ಅಥವಾ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.