ಉಡುಪಿ: ಉಡುಪಿ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ, ಬನ್ನಂಜೆ, ಕುದಿ, ಪೆರ್ಡೂರು, ಬೆಳ್ಳಂಪಳ್ಳಿ, ಗೋಳಿಯಂಗಡಿಯಲ್ಲಿ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬ್ರಹ್ಮಾವರ ಮತ್ತು ಪಟ್ಲದಲ್ಲಿ ಮೆಟ್ರಿಕ್ ಪೂರ್ವ ಬಾಲಕೀಯರ ನಿಲಯಗಳನ್ನು ನಡೆಸಲಾಗುತ್ತಿದ್ದು, ನಿಲಯಗಳಲ್ಲಿ 5 ರಿಂದ 10ನೇ ತರಗತಿ ವರೆಗಿನ ತರಗತಿಗಳಲ್ಲಿ ವ್ಯಾಸಂಗಮಾಡುತ್ತಿರುವ ಪ್ರವರ್ಗ 1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರವರ್ಗ 1ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ, ಪ್ರವರ್ಗ 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 44,500 ರ ಒಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಆದಾಯದ ಮಿತಿ ಇರುವುದಿಲ್ಲ. ನಿಲಯಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿ/ವಿದ್ಯಾರ್ಥಿನೀಯರು, ಜಾತಿ/ಆದಾಯ ಪ್ರಮಾಣ ಪತ್ರ, 2018-19ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕ ಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಯಿಂದ ಪಡೆದ ಪ್ರಮಾಣ ಪತ್ರ, 2 ಫೋಟೋಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿ ಅಥವಾ ಸಂಬಂಧ ಪಟ್ಟ ನಿಲಯದ ಮೇಲ್ವಿಚಾರಕರಿಗೆ ಮೇ. 31ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಅರ್ಜಿ ನಮೂನೆಯನ್ನು ಸಂಬಂಧ ಪಟ್ಟ ವಿದ್ಯಾರ್ಥಿನಿಲಯ, ಸ್ಥಳೀಯ ಗ್ರಾಮ ಪಂಚಾಯತ್ ಕಚೇರಿ ಅಥವಾ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿ, ದೂ.ಸಂ 0820-2520739 ಅನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.