ಉಡುಪಿ: ಡಾ. ಶಿವಕುಮಾರ ಸ್ವಾಮೀಜಿಯವರ ಜಯಂತಿಯ ಅಂಗವಾಗಿ ಸಂಗಮ ಸಮಾವೇಶ ಸಮಾರಂಭ ಮತ್ತು ಜನಸ್ಪಂದನ ಪತ್ರಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ನೀಡಲಿರುವ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿಗಾಗಿ ಬಹುಮುಖ ಪ್ರತಿಭೆ ಮಾ. ಪ್ರಥಮ್ ಕಾಮತ್ ಕಟಪಾಡಿ ಇವರು ಆಯ್ಕೆಯಾಗಿರುತ್ತಾರೆ. ಮೇ 22 ರಂದು ಬೆಂಗಳೂರಿನ ಜೆ. ಪಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಈ ಸಂದರ್ಭದಲ್ಲಿ ಪ್ರಥಮ್ ಕಾಮತ್ ಕಟಪಾಡಿ ಇವರಿಂದ 75 ನೇ ಜಾದೂ ಪ್ರದರ್ಶನ ಕೂಡ ನಡೆಯಲಿದೆ.