ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ 32 ವರ್ಷದ ಪ್ರತಾಪ್ ಮೃತಪಟ್ಟ ಮೀನುಗಾರ.
ಇವರು ಇಂದು ಬೆಳಿಗ್ಗೆ ಮೀನುಗಾರಿಕೆ ಮುಗಿಸಿಕೊಂಡು ಅಕ್ಕನ ಮಗ ಕಿರಣ್ ಎಂಬಾತನ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪ್ರತಾಪ್ ದಿಢೀರ್ ಅಸ್ವಸ್ಥಗೊಂಡು ಕಿರಣ್ ಮೈಮೇಲೆ ಬಿದಿದ್ದರು. ತಕ್ಷಣವೇ ಕಲ್ಯಾಣಪುರ ಗೊರಾಠಿ ಅಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಪ್ರತಾಪ್ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಾಪ್ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.