ಉಡುಪಿ: ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 29 ಮತ್ತು 30 ರಂದು, ಉಡುಪಿ ತಾಲೂಕಿನ 6, ಕುಂದಾಪುರ ತಾಲೂಕಿನ 3 ಮತ್ತು ಕಾರ್ಕಳ ತಾಲೂಕಿನ 2 ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಈ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಯಲು, ಎಲ್ಲಾ ರೀತಿಯ ಅವ್ಯವಹಾರ ತಡೆಗಟ್ಟಲು ಮತ್ತು ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ, ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ ಸೆಕ್ಷನ್ 144(1) ರಂತೆ ನಿಷೇದಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.