ಬ್ರಹ್ಮಾವರ : ಮೇ 26 ರಂದು ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಕ್ಷಯರೋಗದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಬ್ರಹ್ಮಾವರ ತಾಲೂಕು ಆರೋಗ್ಯ ಇಲಾಖೆಯ ಹಿರಿಯ ಮೇಲ್ವಿಚಾರಣಾಧಿಕಾರಿ ಡಾ. ಮಂಜುನಾಥ್ ವಿದ್ಯಾರ್ಥಿಗಳಿಗೆ ಕ್ಷಯರೋಗದ ಬಗ್ಗೆ ಜಾಗೃತಿ ಮತ್ತು ಅದರ ಕುರಿತಾದ ಮಾಹಿತಿಯನ್ನು ನೀಡಿದರು.
ಶ್ರೀಮತಿ ರೇಷ್ಮಾ ಸಮುದಾಯ ಆರೋಗ್ಯ ಅಧಿಕಾರಿ ಹೆರೂರು, ಶ್ರೀಮತಿ ಸರೋಜಿನಿ ಸಮುದಾಯ ಆರೋಗ್ಯ ಅಧಿಕಾರಿ ಹಾರಾಡಿ,
ಸಂಸ್ಥೆಯ ಸಂಚಾಲಕರಾದ ಸುಬ್ರಮಣ್ಯ ಹಾಗೂ ನಿರ್ದೇಶಕರಾದ ಶ್ರೀಮತಿ ಮಮತಾ ಹಾಗೂ ಪ್ರಾಂಶುಪಾಲರಾದ ಸೀಮಾ ಜಿ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಅನುಪಮಾ ಭಟ್ ಸ್ವಾಗತಿಸಿದರು, ವಾಣಿಜ್ಯ ಉಪನ್ಯಾಸಕಿ ಶ್ರೀಮತಿ ಮನಿಶಾ ಶೆಟ್ಟಿ ವಂದಿಸಿದರು. ಸಂಸ್ಥೆಯ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.