ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಉದ್ಘಾಟಿಸಿದರು. ಎಣ್ಣೆಹೊಳೆ ಏತ ನೀರಾವರಿ ಯೋಜನಾ ಸ್ಥಳದಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್ ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್ ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸುಕುಮಾರ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ, ರಾಜ್ಯ ಗೇರು ಬೀಜ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಇತರರು ಉಪಸ್ಥಿತರಿದ್ದರು.












