ಜೂನ್ 6: ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ

ಉಡುಪಿ: ಟೆಸ್ಟಾ ಪ್ರಿಂಟ್ಸ್ ಪ್ರೈ. ಲಿ, ಓಮ್ನಿಯನ್ ಪ್ರೀಮಿಡಿಯಂ ಪ್ರೈ.ಲಿ, ರಿಲಯನ್ಸ್ ಜಿಯೋ ಇನ್ಪೋಕಾಮ್ ಪ್ರೈ.ಲಿ, ಪ್ರಕಾಶ ರೀಟೈಲ್ ಪ್ರೈ.ಲಿ ಹಾಗೂ ಮೇಡ್ ಪ್ಲಾಸ್ ಪ್ರೈ.ಲಿ ವತಿಯಿಂದ ಜೂನ್ 6 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ರಜತಾದ್ರಿ, ಮಣಿಪಾಲ, ಮೊ.ಸಂಖ್ಯೆ: 8105618291, 8197440155 ಹಾಗೂ 9945856670 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.