ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಮಾಡಿರುವ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಪು ಯುವ ಮೋರ್ಚಾ ವತಿಯಿಂದ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ಹಾಗೂ ಕಾಪು ಪೊಲೀಸ್ ಠಾಣಾ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು.
ಪ್ರಚೋದನಕಾರಿ ಪೋಸ್ಟ್ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶ ಹೊಂದಿರುವ ಮತೀಯವಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಪೂಜಾರಿ, ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಕಾಪು ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸೋನು ಪಾಂಗಾಳ, ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.