ಉಡುಪಿ : 12 ವರ್ಷಗಳ ಕಾಲ ಬೈಂದೂರಿನ ಶಾಸಕರಾಗಿ, ರಾಜ್ಯ 3ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ, ಪ್ರಗತಿಪರ ಕೃಷಿಕ, ಉಡುಪಿ ಜಿಲ್ಲಾ ಬಿಜೆಪಿಯ ಪ್ರಥಮ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿರುವ ಕರಾವಳಿ ಕರ್ನಾಟಕದ ರಾಜಕೀಯ ಭೀಷ್ಮರೆಂದೇ ಖ್ಯಾತರಾಗಿದ್ದ ಎ.ಜಿ. ಕೊಡ್ಗಿ (93 ವರ್ಷ) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.