‘ಮಿಷನ್ ಮೋಡ್’ನಲ್ಲಿ ಮೋದಿ ಸರ್ಕಾರ: 18 ತಿಂಗಳಲ್ಲಿ 10 ಲಕ್ಷ ಜನರ ನೇಮಕಾತಿಗೆ ಆದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಮುಂದಿನ 18 ತಿಂಗಳಲ್ಲಿ 10 ಲಕ್ಷ ಜನರನ್ನು “ಮಿಷನ್ ಮೋಡ್” ನಲ್ಲಿ ನೇಮಕ ಮಾಡಿಕೊಳ್ಳಲು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳನ್ನು ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಮಂಗಳವಾರ ತಿಳಿಸಿದೆ.

ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯನ್ನು ಪರಿಶೀಲಿಸಿದ ನಂತರ ಪ್ರಧಾನಿಯಿಂದ ಈ ನಿರ್ದೇಶನ ಬಂದಿದೆ ಎಂದು ಪಿಎಂಒ ತಿಳಿಸಿದೆ.

“ಪಿಎಂ ನರೇಂದ್ರ ಮೋದಿಯವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದರು” ಎಂದು ಪಿಎಂಒ ಟ್ವೀಟ್‌ನಲ್ಲಿ ತಿಳಿಸಿದೆ.