ಉಡುಪಿ: ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ)ಯು ಜೂನ್ 16 ಮತ್ತು 17 ರಂದು ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144(1) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.