ಸ್ವ-ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಜಿಲ್ಲೆಯ
ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿವಾಸಿಗಳು ಆರ್ಥಿಕ ಅಭಿವೃದ್ಧಿ ಸಾಧಿಸುವ ಸಲುವಾಗಿ ಸರಕಾರದ ದೀನದಯಾಳ್ ಅಂತ್ಯೋದಯ-ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಕುರಿತು ಸ್ವ-ಸಹಾಯ ಗುಂಪುಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿ.ಎಂ.ಎಫ್.ಎಮ್.ಇ) ಕಾರ್ಯಕ್ರಮದಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಪ್ರಧಾನ ಮಂತ್ರಿ ಸ್ವ-ನಿಧಿ ಯಡಿ ವಿಶೇಷ ಕಿರು ಸಾಲ ಸೌಲಭ್ಯ ಪಡೆಯಲು ನಗರದ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.