ಕಾರ್ಕಳ: ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ
ಉಡುಪಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಗ್ಗೆ 6.45 ಕ್ಕೆ ಕಾರ್ಕಳ ದಾನಶಾಲೆಯ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಮಂಗಳೂರು ಕರ್ನಾಟಕ
ಗೇರು ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಬೆಂಗಳೂರು ಆಯುಷ್ ನಿರ್ದೇಶನಾಲಯದ ಆಯುಕ್ತ ರಾಮಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ವಿಷ್ಣುವರ್ಧನ್ ಹಾಗೂ ಮತ್ತಿತರರು
ಭಾಗವಹಿಸಲಿದ್ದಾರೆ.