ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗದಿನಾಚರಣೆ

ಕಾರ್ಕಳ: ಹಿರ್ಗಾನದಲ್ಲಿರುವ ಕ್ರಿಯೇಟಿವ್ ಪ.ಪೂ .ಕಾಲೇಜಿನಲ್ಲಿ ‘ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿಯಲ್ಲಿ ವಿಶ್ವ ಯೋಗದಿನವನ್ನು ಆಚರಿಸಲಾಯಿತು.

ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಘವೇಂದ್ರ ರಾವ್ ಮಾತನಾಡಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ದೈಹಿಕ ದೃಢತೆ ಮತ್ತು ಮಾನಸಿಕ ಏಕಾಗ್ರತೆ ಗಳಿಸಲು ಸಾಧ್ಯ. ಪ್ರತಿದಿನ ಯೋಗಾಭ್ಯಾಸ ಮಾಡಿದಾಗ ಆರೋಗ್ಯವಂತ ಜೀವನ ನಡೆಸಬಹುದು ಎಂದರು.

ವಿದ್ಯಾ ಸಂಸ್ಥೆಯ ಉಪನ್ಯಾಸಕ ಡಾ.ಆದಂ ಶೇಕ್, ರಾಜೇಶ್ ಶೆಟ್ಟಿ, ಶಿವಕುಮಾರ್ ಉಪಸ್ಥಿತರಿದ್ದರು.

ಸಂಸ್ಥೆಯ ಸುಮಾರು 425 ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮಾ. ಸುಚಾಂಕ್ಷ್ ಯೋಗಾಸನ ಮಾರ್ಗದರ್ಶನ ನಡೆಸಿಕೊಟ್ಟರು.