ಜ್ಞಾನಸುಧಾ ಕಾಲೇಜಿನಲ್ಲಿ ಮಾಸಿಕ ಮೌಲಿಕ ಸರಣಿ ‘ಮೌಲ್ಯಸುಧಾ’ ಉಪನ್ಯಾಸ ಕಾರ್ಯಕ್ರಮ ಉದ್ಘಾಟನೆ

ಗಣಿತ ನಗರ: ಇಡೀ ವಿಶ್ವವೇ ಭಾರತದ ಕಡೆ ತಿರುಗುವಂತೆ ಮಾಡಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ. ಬದುಕಿದ್ದು ಮೂವತ್ತೊಂಬತ್ತು ವರ್ಷವಾದರೂ, ಅವರು ಮನುಕುಲಕ್ಕೆ ನೀಡಿದ ಸಂದೇಶ ಸಾರ್ವಕಾಲಿಕವಾದುದು ಎಂದು ಶ್ರೀ ಮುನಿರಾಜ ರೆಂಜಾಳ ಹೇಳಿದರು.

ಅವರು ಗಣಿತ ನಗರದ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ ವತಿಯಿಂದ ಪ್ರಾರಂಭಿಸಲಾದ ಮಾಸಿಕ ಕಾರ್ಯಕ್ರಮ ಸರಣಿ ಮಾಲಿಕೆ ‘ಮೌಲ್ಯ ಸುಧಾ’ವನ್ನು ಉದ್ಘಾಟಿಸಿ, ‘ಸ್ವಾಮಿ ವಿವೇಕಾನಂದರ ಜೀವನಾದರ್ಶಗಳು’ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ನೀಡಿದರು.

ರಾಷ್ಟ್ರಪಿತ ಗಾಂಧೀಜಿ ಕೂಡಾ ಸ್ವಾಮಿ ವಿವೇಕಾನಂದರಿಂದ ಪ್ರಭಾವಿತರಾಗಿದ್ದಲ್ಲದೆ, ‘ಅವರ ಪುಸ್ತಕಗಳನ್ನು ಓದಿ ನನ್ನ ದೇಶ ಪ್ರೇಮ ಇಮ್ಮಡಿಗೊಂಡಿತು’ ಎಂದುಹೇಳಿಕೊಂಡಿದ್ದರು, ಮುಂದೆ ಗಾಂಧೀಜಿ ವಿಶ್ವಮಟ್ಟದ ನಾಯಕನಾಗಿ ಬೆಳೆದುದರ ಹಿಂದೆ ವಿವೇಕಾನಂದರ ಜೀವನಾದರ್ಶಗಳು ಪ್ರಭಾವ ಬೀರಿವೆ ಎಂದರು.

ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿ, ನಮ್ಮ ಮಕ್ಕಳು ತಂದೆ-ತಾಯಿಯನ್ನು ಹಾಗೂ ಸಮಾಜವನ್ನುಗೌರವಿಸಿಕೊಂಡು ಮೌಲ್ಯಾಧಾರಿತ ಜೀವನ ನಡೆಸಿಕೊಂಡು ಬರಬೇಕೆಂಬ ಸದಾಶಯದೊಂದಿಗೆ ‘ಮೌಲ್ಯಸುಧಾ’ವನ್ನುರೂಪಿಸಲಾಗಿದ್ದು, ಸಂಸ್ಕೃತಿ, ಸಂಸ್ಕಾರ, ಸದ್ವಿಚಾರದಡಿ ತಿಂಗಳಿಗೊಂದರಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೂ ಮುಕ್ತ ಅವಕಾಶವಿದೆ ಎಂದರು.

ಈ ಸಂದರ್ಭದಲ್ಲಿ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪುರಸ್ಕೃತ ಮುನಿರಾಜ ರೆಂಜಾಳರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎ.ಪಿ.ಜಿ.ಇ.ಟಿ ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಶ್ರೀ ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಕಮಲಾಕ್ಷ ನಾಯಕ್, ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜ್ ಪ್ರಿನ್ಸಿಪಾಲ್ ದಿನೇಶ್.ಎಂ.ಕೊಡವೂರ್, ಉಡುಪಿ ಜ್ಞಾನಸುಧಾ ಪಿಯು ಕಾಲೇಜ್ ಪ್ರಿನ್ಸಿಪಾಲ್‌ ಗಣೇಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಿನ್ಸಿಪಾಲ್ ಉಷಾ ರಾವ್.ಯು ಉಪಸ್ಥಿತರಿದ್ದರು.

ಉಪನ್ಯಾಸಕ ಸಂತೋಷ್‌ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.