ಗೋವಾ: ಕುಟುಂಬದ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದ ಚಿತ್ರ ನಟ ದಿಗಂತ್ ಸಮುದ್ರ ದಡದಲ್ಲಿ ಸಮ್ಮರ್ ಸಾಲ್ಟ್ ಜಂಪ್/ಬ್ಯಾಕ್ ಫ್ಲಿಪ್ ಸ್ಟಂಟ್ ಮಾಡುವ ಹೊತ್ತಿಗೆ ಏಟು ಮಾಡಿಕೊಂಡಿದ್ದು ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಗೋವಾದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಟನನ್ನು ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.