ಪಡುಬಿದ್ರಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 23 ನೇ ನೂತನ ಪಡುಬಿದ್ರಿ ಶಾಖೆಯ ಉದ್ಘಾಟನಾ ಸಮಾರಂಭವು ಜೂ.27ರಂದು ಬೆಳಿಗ್ಗೆ 9ಗಂಟೆಗೆ ನಡೆಯಲಿದೆ.
ಪಡುಬಿದ್ರಿ ಮುಖ್ಯ ರಸ್ತೆಯ ಧನ್ವಂತರಿ ಕೃಪಾ ಅಂಚನ್ ಬಿಲ್ಡಿಂಗ್ ನ ಒಂದನೇಯ ಮಹಡಿಯಲ್ಲಿ ಆರಂಭಗೊಂಡಿರುವ ನೂತನ ಶಾಖೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.
ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘ ಹಾಗೂ ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಉದಯ್ ಅಮೀನ್ ಮಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿತೇಂದ್ರ ಪುಠಾಡೋ ಪಲಿಮಾರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ, ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷ ಮಹಮ್ಮದ್ ನಿಯಾಜ್, ಪಡುಬಿದ್ರಿ ತರಂಗಿಣಿ ಮಿತ್ರಮಂಡಳಿ ಅಧ್ಯಕ್ಷ ರಮಾಕಾಂತ್ ರಾವ್, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯ ಪ್ರಾಣೇಶ್ ಹೆಜಮಾಡಿ, ಅಂಚನ್ ಆಯುರ್ವೇದಿಕ್ ಇಂಡಸ್ಟ್ರೀಸ್ ಹಾಗೂ ಕಟ್ಟಡದ ಮಾಲೀಕ ಡಾ. ನಾರಾಯಣ ಟಿ. ಅಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ.,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಆಡಳಿತ ಮಂಡಳಿಯ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ್ ಎನ್., ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀನಿವಾಸರ ಬಿ.ಪಿ, ಶ್ರೀ ಗೋಪಾಲ್ ಎಮ್., ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ ಮತ್ತು ಸಲಹಾ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ.