ಲೇಡಿ ಸೂಪರ್ ಸ್ಟಾರ್ ನಯನತಾರಾ ನಿರ್ದೇಶಕ ವಿಗ್ನೇಶ್ ಜತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ತನ್ನ ಬಹುದಿನದ ಗೆಳೆಯ, ನಿರ್ದೇಶಕ ವಿಗ್ನೇಶ್ ಶಿವನ್ ಜತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು, 2020ರಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಕಾಲಿವುಡ್ನಲ್ಲಿ ಹರಿದಾಡುತ್ತಿದೆ.
ನಯನತಾರಾ ಗೆಳೆಯ ವಿಗ್ನೇಶ್ ಜತೆಗೆ ಹಲವು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಇಬ್ಬರು ನಿಶ್ಚಿತಾರ್ಥ ಆಗುತ್ತಿರುವ ವಿಷಯ ಕಾಲಿವುಡ್ನಲ್ಲಿ ಸದ್ಯ ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ನಯನತಾರಾ ಆಗಲಿ ವಿಗ್ನೇಶ್ ಆಗಲಿ ಅಧಿಕೃತವಾಗಿ ಮಾಹಿತಿ ನೀಡಿಲ್ಲ.
ಸದ್ಯ ನಯನತಾರಾ ಸೂಪರ್ ಸ್ಟಾರ್ ರಜನಿಕಾಂತ್ ಅವರ ಜತೆ ‘ದರ್ಬಾರ್’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೆ ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಜತೆ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.