ಪ್ಲಾಸ್ಟಿಕ್ ಬ್ಯಾನ್: ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಿಯಂತ್ರಣ ಕೊಠಡಿಗಳ ಸ್ಥಾಪನೆ

ನವದೆಹಲಿ: ಕಾನೂನಿನ ಪರಿಣಾಮಕಾರಿ ಜಾರಿಗಾಗಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ನ ಅಕ್ರಮ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಪರಿಶೀಲಿಸಲು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಿಳಿಸಿದೆ.

ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆ ನಿಷೇಧ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಏಕ ಬಳಕೆಯ ಪ್ಲಾಸ್ಟಿಕ್ ಎಂದರೆ ಒಮ್ಮೆ ಮಾತ್ರ ಬಳಸಿ ಬಿಸಾಡುವ ವಸ್ತುಗಳು. ನಿಷೇಧದ ಅಡಿಯಲ್ಲಿ ಒಳಗೊಂಡಿರುವ ವಸ್ತುಗಳಲ್ಲಿ ಪ್ಲಾಸ್ಟಿಕ್ ಕಡ್ಡಿಗಳು, ಬಲೂನ್‌ಗಳಿಗೆ ಹಾಕುವ ಪ್ಲಾಸ್ಟಿಕ್ ಕಡ್ಡಿಗಳು, ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿ ಸ್ಟಿಕ್‌ಗಳು, ಐಸ್ ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಪಾಲಿಸ್ಟೈರೀನ್ (ಥರ್ಮಾಕೋಲ್), ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು, ಪ್ಲಾಸ್ಟಿಕ್ ಗ್ಲಾಸ್‌ಗಳು ಮತ್ತು ಪ್ಲಾಸ್ಟಿಕ್ ಕಟ್ಲರಿಗಳು ಸೇರಿವೆ.

ಕಾನೂನು ಬಾಹಿರವಾಗಿ ಈ ವಸ್ತುಗಳ ತಯಾರಿಕೆ, ಆಮದು, ದಾಸ್ತಾನು ವಿತರಣೆ ಮಾರಾಟ ಅಥವಾ ಬಳಕೆ ಮಾಡಿದಲ್ಲಿ ಶಿಕ್ಷೆ ಕಟ್ಟಿಟ್ಟ ಬುತ್ತಿ.