ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯ ತಾಂತ್ರಿಕ ಮತ್ತು ತಾಂತ್ರಿಕೇತರ
ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಜುಲೈ 24 ರಂದು ನಡೆಯುವ ಆನ್ಲೈನ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
1999 ಡಿಸೆಂಬರ್ 29 ರಿಂದ 2005 ಜೂನ್ 29 ರ ಒಳಗೆ ಜನಿಸಿರುವ, ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಕಲಾ, ವಾಣಿಜ್ಯ, ವಿಜ್ಞಾನ, ವಿಭಾಗದಲ್ಲಿ ಶೇ. 50 ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ, ಅಭ್ಯರ್ಥಿಗಳು ಜುಲೈ 5 ರ ಒಳಗೆ ವೆಬ್ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ, ಉಡುಪಿ ಅಥವಾ ಮೊ.ನಂ. 9945856670, 8197440155 ಮತ್ತು 8105618291 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.