ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾಟಿ ಕೋಳಿ ಮರಿಗಳನ್ನು ವಿತರಿಸಲು
ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.