ಉಡುಪಿ, : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದಲ್ಲಿ ಮೇ 8 ರಂದು ಬೆಳಗ್ಗೆ 10 ಕ್ಕೆ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಮತ್ತು ನೂತನ ಕೃತಕ ಅವಯವ ಜೋಡಣಾ ಘಟಕವನ್ನು ಉಡುಪಿ ಜಿಲ್ಲಾಧಿಕಾರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷೆ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಘಟಕದಲ್ಲಿ ಗುರುತಿಸಲಾದ 7 ಫಲಾನುಭವಿಗಳಿಗೆ ಕೃತಕ ಅವಯವಗಳನ್ನು ಜಿಲ್ಲಾಧಿಕಾರಿಗಳು ಹಸ್ತಾಂತರಿಸಲಿರುವರು. ವಿವಿಧ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು, ಮಾಧವ ಪೈ ಮೆಮೋರಿಯಲ್ ಕಾಲೇಜು, ಶ್ರೀ ಮತಿ ರುಕ್ಮಿಣಿ ಶೆಡ್ತಿ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ಉಪೇಂದ್ರ ಪೈ ಮೆಮೊರಿಯಲ್ ಕಾಲೇಜು, ಬಂಡಾರ್ಸ್ಕರ್ಸ್ ಆಟ್ರ್ಸ್ ಎಂಡ್ ಸಾಯಿನ್ಸ್ ಕಾಲೇಜು, ಮಂಜುನಾಥ ಪೈ ಮೆಮೋರಿಯಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳ ಮತ್ತು ವಿದ್ಯಾರತ್ನ ಕಾಲೇಜು ಆಫ್ ನರ್ಸಿಂಗ್, ಉಡುಪಿಯ ಪ್ರೋಗ್ರಾಮ್ ಆಫೀಸರ್ಗಳನ್ನು ಗುರುತಿಸಿ, ಸನ್ಮಾನಿಸಲಾಗುವುದು. ಮೇ 4 ರಂದು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆಯನ್ನು ನಡೆಸಲಾಗಿದ್ದು, ವಿಜೇತರಾದವರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ವಿತರಿಸಲಾಗುವುದು.
ಈ ಸಂದರ್ಭದಲ್ಲಿ ನವದೆಹಲಿ ನ್ಯಾಶನಲ್ ಹೆಡ್ ಕ್ವಾಟರ್ಸ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮ್ಯಾನೆಜಿಂಗ್ ಕಮಿಟಿ ಮೆಂಬರ್ ಬಸ್ರೂರು ರಾಜೀವ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಡಾ. ಉಮೇಶ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ., ಗೌರವ ಖಜಾಂಜಿ ಟಿ. ಚಂದ್ರಶೇಖರ್, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ .ಕೆ ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಉಪಸ್ಥಿತರಿರುವರು.