ವೈದ್ಯರ ದಿನಾಚರಣೆ: ಆದರ್ಶ ಆಸ್ಪತ್ರೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭ

ಉಡುಪಿ: ಉಡುಪಿಯ ಆದರ್ಶ ಆಸ್ಪತ್ರೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆಯ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ವೈದರಿಗೆ ಸನ್ಮಾನ ಕಾರ್ಯಕ್ರಮವು ಆದಿತ್ಯವಾರ ಜೂನ್ 3 ರಂದು ಬೆಳಿಗ್ಗೆ 9.30 ಗಂಟೆಗೆ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ನೆರವೇರಿಸಲಿದ್ದಾರೆ. ಆದರ್ಶ ಆಸ್ಪತ್ರೆಯ ನರರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಪ್ರೋ. ಎ ರಾಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೋಲೀಸ್ ಅಧೀಕ್ಷಕ ಎನ್ ವಿಷ್ಣುವರ್ಧನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್ ಭಾಗವಹಿಸಲಿದ್ದಾರೆ.

ವೈದ್ಯರ ದಿನಾಚರಣೆಯ ಪ್ರಯುಕ್ತ ಡಾ. ಅಂಜಲಿ ವಾಗ್ಲೆ, ಡಾ.ವಿದ್ಯಾ, ಡಾ. ರಂಗನಾಥ್ ವೈ.ಪಿ, ಡಾ.ಎ ರವೀಂದ್ರನಾಥ್ ಶೆಟ್ಟಿ, ಡಾ.ಪ್ರಶಾಂತ್ ಹೆಗ್ಡೆ, ಡಾ. ಶ್ರೀಷ ರಾವ್ ಕೊರಡ್ಕಲ್ ಇವರನ್ನು ಸನ್ಮಾನಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲಾ ಚಂದ್ರಶೇಖರ್ ತಿಳಿಸಿದ್ದಾರೆ.

ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 2.00 ರವೆಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ನಡೆಯಲಿರುವುದು.

ಶಿಬಿರದಲ್ಲಿ ರಕ್ತದ ಸಕ್ಕರೆ ಅಂಶ, ಕೊಬ್ಬಿನಾಂಶ, ಇಸಿಜಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ವೈದ್ಯರ ಸಲಹೆಯ ಮೇರೆಗೆ ಹೃದಯದ ಸ್ಕ್ಯಾನಿಂಗ್ ಹಾಗೂ ಟಿ.ಎಂ.ಟಿ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲಿ ಉಚಿತವಾಗಿ ಮಾಡಲಾಗುವುದು. ಹೃದಯದ ಆಂಜಿಯೋಗ್ರಾಮ್ ಪರೀಕ್ಷೆ ಹಾಗೂ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಹಾಗೂ ಇನ್ನಿತರ ಎಲ್ಲಾ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಗಳನ್ನು ಅತ್ಯಂತ ರಿಯಾಯತಿ ದರದಲ್ಲಿ ಮಾಡಲಾಗುವುದು.

ವೈದ್ಯಕೀಯ ಶಿಬಿರಕ್ಕೆ ಬರುವ ಎಲ್ಲಾ ಶಿಬಿರಾರ್ಥಿಗಳು ತಮ್ಮ ಹಳೆಯ ಚಿಕಿತ್ಸಾ ಚೀಟಿಯನ್ನು ತಪ್ಪದೇ ತರತಕ್ಕದ್ದು. ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ, ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ತಿಳಿಸಿದ್ದಾರೆ.