ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಇವರಿಗೆ ಮುಖ್ಯಮಂತ್ರಿಗಳ ಪ್ರಶಸ್ತಿ

ಉಡುಪಿ: ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ 2021-22ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪ್ರಶಸ್ತಿ’ ಗೆ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಆಯ್ಕೆಯಾಗಿದ್ದು ಜುಲೈ 1 ರಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಇವರು ಪ್ರಸ್ತುತ ಮಂಗಳೂರಿನ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಎಸ್ ಟಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ವಹಿಸಿದ ಕೆಲಸಗಳು, ತೆರಿಗೆ ಆಡಳಿತ, ತೆರಿಗೆ ಕಾಯ್ದೆಗಳ ಬಗೆಗೆ ಅರಿವು-ಜಾಗೃತಿ ಮೂಡಿಸಿರುವುದು, ತೆರಿಗೆ ವಂಚಕರ ಜಾಲವನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಲ್ಲಿ ನಿರ್ವಹಿಸಿದ ಮಹತ್ವದ ಕೆಲಸಗಳನ್ನು ಪರಿಗಣಿಸಿ ‘ಮುಖ್ಯಮಂತ್ರಿಗಳ ಪ್ರಶಸ್ತಿ’ ನೀಡಲಾಗಿದೆ.