ಅಂಬಲಪಾಡಿ: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರ ವತಿಯಿಂದ ರಾಜ್ಯಮಟ್ಟದ ವಿಚಾರಸಂಕಿರಣ

 

ಉಡುಪಿ: ಅಂಬಲಪಾಡಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವತಿಯಿಂದ ಜಿಲ್ಲಾ ಸವಿತಾ ಸಮಾಜದ ಸಹಯೋಗದೊಂದಿಗೆ ಸವಿತಾ ಸಮಾಜಕ್ಕೆ ಸಹಕಾರಿ ಸಂಘಗಳ ಅವಶ್ಯಕತೆ ಮತ್ತು ಅನುಷ್ಠಾನ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಅಂಬಲಪಾಡಿ ಜಿಲ್ಲಾ ಸವಿತಾ ಸಮಾಜ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಲಾಯಿತು.

ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್‌ಚಂದ್ರ ಭಂಡಾರಿ ಮಾತನಾಡಿ, ಸವಿತಾ ಸಮಾಜದ ವೃತ್ತಿ ಬದುಕಿಗೆ ಅಗತ್ಯವಿರುವ ಟಿಶ್ಯು ಪೇಪರ್‌ ತಯಾರಿಸುವ ಕೈಗಾರಿಕಾ ಘಟಕವನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಇಡೀ ರಾಜ್ಯಕ್ಕೆ ಟಿಶ್ಯು ಪೂರೈಸುವ ಗುರಿ ಹೊಂದಲಾಗಿದೆ ಎಂದರು.


ಕರ್ನಾಟಕ ರಾಜ್ಯ ಸವಿತಾ ಸಮಾಜದ ವಿಭಾಗೀಯ ಕಾರ್ಯಸಂಘಟನಾ ಕಾರ್ಯದರ್ಶಿ ಆನಂದ ಆರ್. ವಾರಿಕ್ ಮಾತನಾಡಿದರು.

ಬೆಂಗಳೂರು ಸವಿತಾ ಸಮಾಜದ ಮುಖಂಡ ನಾಮದೇವ್ ನಾಗರಾಜ್, ದಾಸರಹಳ್ಳಿ ಸವಿತಾ ಸಮಾಜದ ಅಧ್ಯಕ್ಷ ಅಂಜನಾಮೂರ್ತಿ, ದಕ್ಷಿಣ ಕನ್ನಡ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಆನಂದ್ ಭಂಡಾರಿ, ಉಡುಪಿ ಜಿಲ್ಲಾ ಪರಿಯಾಳ ಸುಧಾರಕರ ಸಂಘದ ಅಧ್ಯಕ್ಷ ಶಂಕರ್ ಸಾಲ್ಯಾನ್, ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ನಿಂಜೂರು, ಕೋಶಾಕಾರಿ ಶೇಖರ್ ಸಾಲಿಯಾನ್ ಉಪಸ್ಥಿತರಿದ್ದರು.

ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಗೋವಿಂದ ಭಂಡಾರಿ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಕಾರಿ ಮಾಲತಿ ಅಶೋಕ್ ಭಂಡಾರಿ ವಂದಿಸಿದರು. ಪ್ರಜ್ಞಾ ಜಗದೀಶ್ ಪ್ರಾರ್ಥಿಸಿದರು. ಉಡುಪಿ ಜಿಲ್ಲಾ ಸವಿತಾ ಸಮಾಜದ ಕಾರ್ಯದರ್ಶಿ ಸದಾಶಿವ ಬಂಗೇರ ಕಾರ್ಯಕ್ರಮ ನಿರೂಪಿಸಿದರು.