ನಗರಸಭೆ: ಜುಲೈ 16 ರಂದು ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ

ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಜುಲೈ 16 ರಂದು ಮಧ್ಯಾಹ್ನ 12 ಗಂಟೆಗೆ
ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ ನಡೆಯಲಿದ್ದು, ಎಲ್ಲಾ ಹೋಟೆಲ್ ಮಾಲೀಕರು, ವರ್ತಕರು, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು, ಕಲ್ಯಾಣ ಮಂಟಪದ ಮಾಲೀಕರು, ಬೀದಿ ಬದಿ ವ್ಯಾಪಾರಿ ಸಂಘಗಳ ಸದಸ್ಯರು ಹಾಗೂ ಕೈಗಾರಿಕಾ ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.