ಎಸ್.ಎಫ್. ಸಿ ಮುಕ್ತನಿಧಿ ಹಾಗೂ ನಗರಸಭಾ ನಿಧಿ: ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್. ಸಿ ಮುಕ್ತನಿಧಿ ಹಾಗೂ ನಗರಸಭಾ ನಿಧಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅನುದಾನದಡಿ ಪರಿಶಿಷ್ಟ ಜಾತಿಗೆ ಒಳಚರಂಡಿ ಜೋಡಣೆ, ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ನವೀಕರಣ, ಪರಿಶಿಷ್ಟ ಪಂಗಡಕ್ಕೆ ಮುಖ್ಯಮಂತ್ರಿ ಆರೋಗ್ಯ ಕಾರ್ಡ್ ನವೀಕರಣ, ನಳ್ಳಿ ನೀರಿನ ಜೋಡಣೆ, ಶೌಚಾಲಯ ನಿರ್ಮಾಣ ಮತ್ತು ಸ್ವಂತ ಉದ್ಯೋಗ ಹೊಂದಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಮನೆ ದುರಸ್ಥಿ ಮತ್ತು ಶೌಚಾಲಯ ನಿರ್ಮಾಣ:

ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್..ಸಿ ಮುಕ್ತನಿಧಿ ಹಾಗೂ ಇತರೆ ಹಿಂದುಳಿದ ಬಡ ವರ್ಗದವರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಮನೆ ದುರಸ್ಥಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ವಿಕಲಚೇತನರಿಗೆ ಸೌಲಭ್ಯ:

ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್..ಸಿ ಮುಕ್ತನಿಧಿ ಹಾಗೂ ನಗರಸಭೆಯ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಸಾಧನ ಸಲಕರಣೆ, ಆರೋಗ್ಯ ವಿಮೆ, ವಿದ್ಯಾರ್ಥಿವೇತನ ಹಾಗೂ ಸ್ವಂತ ಉದ್ಯೋಗ ಹೊಂದಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.