ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3 ಬಿ ಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸುವಿಧಾ ತಂತ್ರಾಂಶ https://suvidha.karnataka.gov.in ರಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ, ದೂರವಾಣಿ ಸಂಖ್ಯೆ: 0820-2574882, 080-22374832, ಮೊ.ನಂ:9606066389 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.