ಕಾಪು: ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಸಮಿತಿಯ ಪದಾಧಿಕಾರಿಗಳು ಪದಗ್ರಹಣ ಕಾರ್ಯಕ್ರಮ ಜುಲೈ 24 ರಂದು ಹಿರಿಯಡ್ಕದ ಸುರಭಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ನಾಯಕರುಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ)ದ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಾಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.