ಅಮೇರಿಕಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದಾರೆ. ಇಂದು ಬೆಳಗ್ಗೆ ಒರೆಗಾನ್ನ ಯುಜೀನ್ನಲ್ಲಿ ನಡೆದ ಸ್ಪರ್ಧೆಯ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್ ದೂರ ಜಾವೆಲಿನ್ ಎಸೆದು ಎರಡನೇ ಸ್ಥಾನ ಪಡೆದಿದ್ದಾರೆ.
ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಜಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ನಂತರ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಪದಕ ಗೆದ್ದ ಎರಡನೇ ಭಾರತೀಯರಾಗಿದ್ದಾರೆ. ಆ್ಯಂಡರ್ಸನ್ ಪೀಟರ್ಸ್ 90.54 ಮೀಟರ್ ದೂರ ಎಸೆದು ಚಿನ್ನದ ಪದಕ ಗೆದ್ದಿದ್ದಾರೆ.