ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ 6 ಮೆಟ್ರಿಕ್
ಪೂರ್ವ ಹಾಗೂ 14 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಕರಾಟೆ, ಜುಡೋ ಹಾಗೂ ಟೈಕ್ವಾಂಡೋಗಳಲ್ಲಿ ವಿಶೇಷ ಪರಿಣಿತಿ ಹೊಂದಿದ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
40 ವರ್ಷದೊಳಗಿನ, ಬ್ಲ್ಯಾಕ್ ಬೆಲ್ಟ್ ಅರ್ಹತೆ ಹೊಂದಿರುವ, ನೊಂದಾಯಿತ ಕರಾಟೆ ಸಂಘದ ಸದಸ್ಯತ್ವ ಪಡೆದಿರುವ ಅರ್ಹ ಮಹಿಳಾ ತರಬೇತುದಾರರು ಆಗಸ್ಟ್ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.