ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಂದ ವೆಬ್ಸೈಟ್ https://suvidha.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.