ಉಡುಪಿ: ಜು.30 ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಶೃದ್ಧಾಂಜಲಿ ಸಭೆ

ಉಡುಪಿ: ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.

ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ ನೆಟ್ಟಾರು ಅವರಿಗೆ ಅಂತಿಮ ನಮನ ಸಲ್ಲಿಸಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.