ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನ ಎನ್.ಐ.ಎಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಂಡಿರೋದಾಗಿ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ವ್ಯವಸ್ಥಿತ ಸಂಚು, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ .ಐ.ಎ ಗೆ ಪತ್ರ ಬರೆಯಲು ಹೇಳಿದ್ದೇನೆ. ಪ್ರಕರಣವನ್ನ ಎನ್ ಐ ಎ ಗೆ ವಹಿಸಲು ತೀರ್ಮಾನಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆಂದು ಎ ಎನ್ ಐ ವರದಿ ಮಾಡಿದೆ.