ಉಡುಪಿ: ಉಡುಪಿಯ ಪ್ರಖ್ಯಾತ ವಕೀಲ, ಬಿಲ್ಲವ ಮುಖಂಡ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷ ಸಂಕಪ್ಪ. ಎ ಆಗಸ್ಟ್ 1 ರಂದು ಜಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ಶಾಲು ಹೊದೆಸಿ, ಪಕ್ಷದ ಧ್ವಜ ನೀಡುವ ಮೂಲಕ ವಿದ್ಯುಕ್ತವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಉಡುಪಿ ಜಿಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ನಾಯಕರಾದ ವಸಂತ ಪೂಜಾರಿ ಮಂಗಳೂರು, ಇಕ್ಬಾಲ್ ಮಂಗಳೂರು, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಸಂಜಯ್ ಕುಮಾರ್, ಚಂದ್ರಹಾಸ್ ಮತ್ತು ರಜಾಕ್ ಉಪ್ಪಳ ಉಪಸ್ಥಿತರಿದ್ದರು.