ಉಡುಪಿ: ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗೂ ಕಾನೂನಿನಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ.
ಈ ಕುರಿತು ದೂರುಗಳು ದಾಖಲಾದಲ್ಲಿ ಜಿಲ್ಲಾಧಿಕಾರಿಗಳು ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.