ನವದೆಹಲಿ: ಆಗಸ್ಟ್ 5 ರಿಂದ 15 ರವರೆಗೆ ದೇಶಾದ್ಯಂತ ತನ್ನ ಎಲ್ಲಾ ಸಂರಕ್ಷಿತ ಸ್ಮಾರಕಗಳು ಮತ್ತು ತಾಣಗಳಿಗೆ ಸಂದರ್ಶಕರು ಮತ್ತು ಪ್ರವಾಸಿಗರಿಗೆ ಸರ್ಕಾರವು ಉಚಿತ ಪ್ರವೇಶವನ್ನು ನೀಡಿದೆ. ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಈ ವರ್ಷದ ಆಗಸ್ಟ್ 5 ರಿಂದ 15 ರವರೆಗೆ ಎಲ್ಲಾ ಟಿಕೆಟ್ ಹೊಂದಿರುವ ಕೇಂದ್ರ ಸಂರಕ್ಷಿತ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳಲ್ಲಿ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮಹಾನಿರ್ದೇಶಕರು ತಿಳಿಸಿದ್ದಾರೆ.