ಉಡುಪಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ 2021-22 ನೇ ಸಾಲಿನ ಸಾಧನಾ ಪ್ರಶಸ್ತಿ

ಉಡುಪಿ: 2021-22 ನೇ ಸಾಲಿನ ವ್ಯವಹಾರದಲ್ಲಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಸಾಧಿಸಿರುವ ಸರ್ವತೋಮುಖ ಪ್ರಗತಿಗೆ ಮೆಚ್ಚುಗೆಯ ಸಂಕೇತವಾಗಿ 2021-22 ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಮಂಜುನಾಥ ಶೆಟ್ಟಿ ಇವರನ್ನು ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಮಹಾಸಭೆಯಲ್ಲಿ ಸನ್ಮಾನಿಸಿ 2021-22 ನೇ ನೇ ಸಾಲಿನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್, ಬ್ಯಾಂಕಿನ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ನಿರ್ದೇಶಕ ಸುಧಾಕರ ಶೆಟ್ಟಿ ಬಿ ಮುಂತಾದವರು ಉಪಸ್ಥಿತರಿದ್ದರು.