ನವದೆಹಲಿ: ಹರ್ ಘರ್ ತಿರಂಗ ಅಭಿಯಾನದ ಅಡಿಯಲ್ಲಿ ರಾಷ್ಟ್ರೀಯ ಧ್ವಜಗಳ ಮಾರಾಟ ಮತ್ತು ವಿತರಣೆಗೆ ಅನುಕೂಲವಾಗುವಂತೆ ದೇಶದಾದ್ಯಂತ ಎಲ್ಲಾ ಅಂಚೆ ಕಛೇರಿಗಳು ಸ್ವಾತಂತ್ರ್ಯ ದಿನದ ಮೊದಲಿನ ಎಲ್ಲಾ ರಜಾದಿನಗಳಲ್ಲಿ ತೆರೆದಿರುತ್ತವೆ. ಈ ಬಗ್ಗೆ ಸಂಪರ್ಕ ಸಚಿವಾಲಯವು ಪ್ರಕಟಣೆ ಹೊರಡಿಸಿದ್ದು, ಈ ತಿಂಗಳ 7, 9 ಮತ್ತು 14 ರಂದು ಅಂಚೆ ಕಚೇರಿಗಳಲ್ಲಿ ಕನಿಷ್ಠ ಒಂದು ಕೌಂಟರ್ ಮೂಲಕ ರಾಷ್ಟ್ರಧ್ವಜಗಳ ಮಾರಾಟಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದೆ.
ಎಲ್ಲಾ ವಿತರಣಾ ಅಂಚೆ ಕಚೇರಿಗಳಲ್ಲಿ ರಾಷ್ಟ್ರೀಯ ಧ್ವಜಗಳನ್ನು ತಲುಪಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಸಚಿವಾಲಯವು ತಿಳಿಸಿದೆ.