ಉಡುಪಿ: ಅಂಚೆ ಇಲಾಖೆಯ ವತಿಯಿಂದ ಹರ್-ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಸಾರ್ವಜನಿಕರಿಗೆ ರಾಷ್ಟ್ರೀಯ ಧ್ವಜವನ್ನು ಖರೀದಿಸಲು ಅನುಕೂಲವಾಗುವಂತೆ ಆಗಸ್ಟ್ 9 ಹಾಗೂ 14 ರಂದು ಉಡುಪಿ ವಿಭಾಗದ ಎಲ್ಲಾ ಇಲಾಖಾ ಅಂಚೆ ಕಚೇರಿಗಳು ಕಾರ್ಯ ನಿರ್ವಹಿಸಲಿದ್ದು, ಈ ಎರಡೂ ದಿನಗಳಲ್ಲಿ ತಿರಂಗಾ ವಿತರಣೆ ಮಾತ್ರ ನಡೆಯಲಿದ್ದು, ಇತರ ಯಾವುದೇ ವ್ಯವಹಾರಗಳು ಇರುವುದಿಲ್ಲ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.