ಶೇಕಡಾ 100 ಸಾಲ ವಸೂಲಾತಿ ಸಾಧನೆ: ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಪ್ರಶಸ್ತಿ

ಉಡುಪಿ: ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಮತ್ತೆ ಪ್ರಶಸ್ತಿ ದೊರೆತಿದೆ. ಶೇಕಡಾ 100 ಸಾಲ ವಸೂಲಾತಿಯಲ್ಲಿ ನಿರಂತರವಾಗಿ ಹಲವಾರು ವರ್ಷಗಳಿಂದ ಪ್ರಶಸ್ತಿಯನ್ನು ಗಳಿಸಿಕೊಂಡು ಬಂದ ನೆಲ್ಲಿಕಾರು ವ್ಯವಸಾಯ ಸಹಕಾರ ಸಂಘವು ಈ ಬಾರಿ ಮತ್ತೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ಅಧ್ಯಕ್ಷ ಮಾಪಾಲು ಜಯವರ್ಮ ಜೈನ್ ಮತ್ತು ಕಾರ್ಯನಿರ್ವಹಣಾಧಿಕಾರಿ ಜಯರಾಜ್ ಇವರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಎಮ್. ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.