ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ ಫೌಂಡೇಶನ್ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್.ಎ.ಎಂ ಹಾಗೂ ಅಭಿಷೇಕ್ ಲಕ್ಷ್ಮಣ್ ನಾಯ್ಕ್ ಇವರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ವರ್ಷದ ಸಿ.ಎ ಫೌಂಡೇಶನ್ ಫಲಿತಾಂಶದಲ್ಲಿಯೇ ಅರ್ಹತೆ ಪಡೆದಿರುವುದು ಪ್ರಶಂಸನೀಯ. ಮುಂದಿನ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಪರೀಕ್ಷೆಯನ್ನು ಗುರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ.
ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್ ಎ ಎಂ ಹಾಗೂ ಅಭಿಷೇಕ್ ಲಕ್ಷ್ಮಣ್ ನಾಯ್ಕ್ ಇವರನ್ನು ಸಂಸ್ಥೆಯ ಪ್ರಾಂಶುಪಾಲರು, ಸಿಎ ಫೌಂಡೇಶನ್ ಸಂಯೋಜಕ ರಾಘವೇಂದ್ರ ಬಿ ರಾವ್, ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.