ಉಡುಪಿ : ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ಶಿರ್ವ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 18 ಪ್ರಕರಣಗಳನ್ನು ದಾಖಲಿಸಿ, 3250 ರೂ. ದಂಡ ವಸೂಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಿರ್ವ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಸಂಜೀವ ಎಂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.