ಜನತಾ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ 

 

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು.

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಶ್ರೀ.ವಿ.ವಿ.ವಿ ಮಂಡಳಿ  ಅಧ್ಯಕ್ಷ  ಕೆ.ಗೋಪಾಲ ಪೂಜಾರಿಯವರು ಧ್ವಜಾರೋಹಣಗೈದು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ರಾಷ್ಟ್ರೀಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಂಶುಪಾಲ  ಗಣೇಶ ಮೊಗವೀರ ಸ್ವಾತಂತ್ರ್ಯದ ಈ ಸಂಭ್ರಮದಲ್ಲಿ ಶಿಕ್ಷಣ ಕ್ಷೇತ್ರದ ಪಾತ್ರದ ಕುರಿತು ಮಾತನಾಡಿದರು.

ಸಮಾರಂಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಂಜು ಕಾಳಾವರ, ಶ್ರೀವಿ.ವಿ.ವಿ ಮಂಡಳಿಯ ಸದಸ್ಯ  ಶೀನ ಪೂಜಾರಿ, ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ನಂದಿ ದೇವಾಡಿಗ, ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ  ರಾಘವೇಂದ್ರ ಕುಲಾಲ್ , ಸಮರ್ಪಣಾ ಎಜುಕೇಶನಲ್ ಟ್ರಸ್ಟ್‌ ನ ಪದಾಧಿಕಾರಿಗಳು, ಜನತಾ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಬೋಧಕ,ಬೋಧಕೇತರ ವೃಂದದವರು,ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಮಂಜು ಕಾಳಾವರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.