ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬನ್ನಂಜೆಯ ಜಿಲ್ಲಾ ಬಾಲಭವನದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಆಗಸ್ಟ್ 21 ರಿಂದ ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರ ವರೆಗೆ ಸೃಜನಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲ, ನೃತ್ಯ, ರಂಗಚಟುವಟಿಕೆ, ಸಾಹಿತ್ಯ, ಯೋಗ, ಸಂಗೀತ ತರಗತಿಗಳನ್ನು ಉಚಿತವಾಗಿ ನಡೆಸಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನ, ಉಡುಪಿ ದೂ.ಸಂಖ್ಯೆ: 0820-2574978, 0820-2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.