ಉಡುಪಿ: ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು- ನಕಲುಗಾರ -3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ವೆಬ್ಸೈಟ್ https://districts.ecourts.gov.in/udupi-onlinerecruitment ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸೆಪ್ಟಂಬರ್ 26 ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಸೆ. 28 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಧೀಶರ ಕಚೇರಿ ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಪ್ರಕಟಣೆ ತಿಳಿಸಿದೆ.